ಜೆಡಿಎಸ್ ಶಾಸಕರ ತಿಂಗಳ ಸಂಬಳ ಪರಿಹಾರ ಕಾರ್ಯಕ್ಕೆ ವಿನಿಯೋಗ:ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ

ರಾಜ್ಯ:  ಸತತ ಪ್ರವಾಹದಿಂದ ನಲುಗಿರುವ ಉತ್ತರ ಕರ್ನಾಟಕ ಭಾಗದ ಪರಿಹಾರ ಕಾರ್ಯಕ್ಕಾಗಿ ಜೆಡಿಎಸ್‌ ಪಕ್ಷದ ಎಲ್ಲಾ ಶಾಸಕರು ತಮ್ಮ ಒಂದು ತಿಂಗಳ ಸಂಬಳವನ್ನು ನೀಡುತ್ತಿದ್ದಾರೆ ಎಂದು  ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಟ್ವೀಟ್ ನಲ್ಲಿ  ಕಷ್ಟದ ಸಂದರ್ಭದಲ್ಲಿ ನಮ್ಮ ಅಣ್ಣ-ತಮ್ಮಂದಿರೊಂದಿಗೆ ನಿಲ್ಲೋಣ ಎನ್ನುವ ಸಂದೇಶ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಜ್ವರದಿಂದ ಬಳಲುತ್ತಿರುವ ಕಾರಣ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ. ಒಂದೆರಡು ದಿನಗಳಲ್ಲಿ ಉತ್ತರ ಕರ್ನಾಟಕಕ್ಕೆ ತೆರಳಿ ಜನರ ಕಷ್ಟಗಳಲ್ಲಿ ಭಾಗಿಯಾಗುತ್ತೇನೆ ಎಂದು ಮಾಜಿ ಸಿ.ಎಂ ಕುಮಾರಸ್ವಾಮಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.