ಕುಂದಾಪುರ: ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಹಡಾಳಿ ಸರಕಾರಿ ಕಾಡಿನಲ್ಲಿ ನಡೆದಿದೆ.
ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಹಡಾಳಿ ಅಚ್ಚೆಬೆಟ್ಟು ನಿವಾಸಿ ಪ್ರಭಾಕರ ಶೆಟ್ಟಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಪ್ರಭಾಕರ ಶೆಟ್ಟಿ ವಿಪರೀತ ಮದ್ಯಪಾನದ ಮಾಡುವ ಚಟ ಹೊಂದಿದ್ದು, ಇದೇ ಖಿನ್ನತೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಮಾರ್ಚ್ 1ರ ಸಂಜೆ 4ರಿಂದ ಮಾ. 2ರ ಬೆಳಿಗ್ಗೆ 10 ಗಂಟೆಯ ಮಧ್ಯದ ಅವಧಿಯಲ್ಲಿ ಹಡಾಳಿ ಕಾಡಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.