ಕುಂದಾಪುರ: ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರ ಕಸಬಾ ಗ್ರಾಮದ ಕೋಡಿ ಗಡಿಯಾರ ಹಿತ್ಲು ಮೀನುಕೆರೆ ತೋಡಿನಲ್ಲಿ ಡಿ.1ರಂದು ನಡೆದಿದೆ.
ಕುಂದಾಪುರ ಕಸಬಾ ಗ್ರಾಮದ ಕೋಡಿ ಗಡಿಯಾರ ನಿವಾಸಿ ಜೋಗ ಭಂಡಾರಿ (55) ಮೃತ ದುರ್ದೈವಿ. ಇವರು ಬುಧವಾರ ಬೆಳಿಗ್ಗೆ ಮೀನುಕೆರೆ ತೋಡಿಗೆ ಮೀನು ಹಿಡಿಯಲು ಹೋಗಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ತೋಡಿನ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.