ಕುಂದಾಪುರ: ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು-13 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 35 ವರ್ಷದೊಳಗಿನ, ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9 ನೇ ತರಗತಿ ವಿದ್ಯಾರ್ಹತೆ ಹೊಂದಿದ ಸ್ಥಳೀಯ ಅಭ್ಯರ್ಥಿಗಳು ಸಹಾಯಕಿಯರ ಹುದ್ದೆಗೆ ಮೇ 2 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://udupi.nic.in ಅನ್ನು ಸಂಪರ್ಕಿಸುವಂತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.