ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಕುಂದಾಪುರ ಮಂಡಲ ಮಹಿಳಾ ಮೋರ್ಚಾದ ಸಂಯುಕ್ತ ಆಶ್ರಯದಲ್ಲಿ ಇದೇ ನಾಳೆ (ಸೆ. 17) ಕೋಟ ಮಂಗಲ್ಯಮಂದಿರದಲ್ಲಿ ಅಂಧರಿಗೆ ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇದೇ ವೇಳೆ ಉಚಿತ ಕಣ್ಣಿನ ತಪಾಸಣೆ, ಉಚಿತ ಶಸ್ತ್ರಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ಕೂಡ ನಡೆಯಲಿದೆ.
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಕುಂದಾಪುರ ಮಂಡಲ ಕ್ಷೇತ್ರಧ್ಯಕ್ಷ ಶಂಕರ ಅಂಕದಕಟ್ಟೆ, ಕುಂದಾಪುರ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ರೂಪ ಪೈ ಮೊದಲಾದವರು ಭಾಗವಹಿಸುವರು.