ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಕುಂದಾಪುರ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಉಡುಪಿ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಮತ್ತು ಎಸ್ಸಿಲರ್ ವಿಷನ್ ಫೌಂಡೇಶನ್ ಇವರ ಸಹಯೋಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಅಂಗವಾಗಿ ಅಂಧರಿಗೆ ನೆರವು, ಉಚಿತ ಕಣ್ಣಿನ ತಪಾಸಣೆ, ಉಚಿತ ಶಸ್ತ್ರಚಿಕಿತ್ಸೆ,ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವನ್ನು ಕೋಟ ಮಾಂಗಲ್ಯ ಸಭಾಮಂದಿರದಲ್ಲಿ ಆಯೋಜಿಸಲಾಯಿತು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷ ವೀಣಾ. ಎಸ್. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಂದಾಪುರ ಮಹಿಳಾ ಮೋರ್ಚಾದ ಅಧ್ಯಕ್ಷೆ ರೂಪ ಪೈ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಆಹಾರ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪ ಜಿ ಸುವರ್ಣ, ರಾಜ್ಯ ಕಾರ್ಯಕಾರಣಿ ಸದಸ್ಯ ಗೀತಾಂಜಲಿ ಸುವರ್ಣ, ಸುರೇಶ್ ಗುರ್ಮೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲದ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಕುಂದಾಪುರ ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷ ಸುಲತಾ ಹೆಗ್ಡೆ, ಅಜಿತ್, ರಾಘವೇಂದ್ರ, ಡಾ.ಶಮಂತ್ ಮೊದಲಾದವರು ಉಪಸ್ಥಿತರಿದ್ದರು.