ಕುಂದಾಪುರ :ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು, ಕುಂದಾಪುರ ಇವರ ಸಹಭಾಗಿತ್ವದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜುಲೈ 22 ರಂದು ರಸಾಯನ ಶಾಸ್ತ್ರ ಉಪನ್ಯಾಸಕರಿಗೆ 1 ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ಇದರ ಕಾರ್ಯ ದರ್ಶಿ ಯವರಾದ ಶ್ರೀ.ಕೆ. ರಾಧಾಕೃಷ್ಣ ಶೆಣೈ ಅವರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ಅಧ್ಯಕ್ಷ ರಾದ ಶ್ರೀ ಮಂಜುನಾಥ್ ಭಟ್ ವಹಿಸಿದ್ದರು.
ವಿದ್ಯಾರ್ಥಿಗಳು ಆಸಕ್ತಿ ಇಲ್ಲದ ಕ್ಷೇತ್ರದಲ್ಲಿ ಮುಂದುವರೆಯುವಂತೆ ಒತ್ತಾಯ ಮಾಡುವುದರಿಂದ ಸಮಾಜದಲ್ಲಿ ಅನೇಕ ದುರಂತ ಗಳು ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ. ಅದಕ್ಕೆ ಅವಕಾಶ ಕೊಡದೇ ಅವರ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಅನುವು ಮಾಡಿಕೊಡಬೇಕು ಎಂದು ಅಂದಿನ ಸಂಪನ್ಮೂಲ ವ್ಯಕ್ತಿ ಯಾಗಿ ಆಗಮಿಸಿದ Academics and Training, USAMEC, ಬೆಂಗಳೂರು ಇದರ ನಿರ್ದೇಶಕರಾದ ಡಾ. ಸಿ. ಕೆ. ಮಂಜುನಾಥ್ ತಿಳಿಸಿದರು.
ರಮಾಕಾಂತ್ ರೇವಣ್ ಕರ್ ಗೌರವಾಧ್ಯಕ್ಷರು, ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ,
ಸಂದೀಪ್ ಗಾಣಿಗ ಪ್ರಾಂಶುಪಾಲರು,ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು, ಕುಂದಾಪುರ, ಹರಿಪ್ರಸಾದ್
ಕಾರ್ಯದರ್ಶಿಗಳು, ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ, ಶ್ರೀ ಕೃಷ್ಣಮೂರ್ತಿ ರಾಜ್ಯ ಪ್ರತಿನಿಧಿ
ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯೋದಯ ಪದವಿಪೂರ್ವ ಕಾಲೇಜು ಉಡುಪಿ ಇಲ್ಲಿನ ಉಪನ್ಯಾಸಕಿ. ಶ್ರೀಮತಿ ರಂಜನಾ ವಂದಿಸಿದರು. ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ರಾಜ್ಯ ಪ್ರತಿನಿಧಿ ಕೃಷ್ಣ ಮೂರ್ತಿ ಸ್ವಾಗತಿಸಿದರು. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ಮಿತಾ ಶೆಟ್ಟಿ ಕಾರ್ಯಕ್ರಮ ವನ್ನು ನಿರೂಪಿಸಿದರು.

















