ಕುಂದಾಪುರ: ದೇಶದ ೭೪ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಲೇಜಿನ ಆವರಣದಲ್ಲಿ ಆಯೋಜಿಸಿದ ಧ್ವಜಾರೋಹಣ ಕಾರ್ಯಕ್ರಮವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕಾಲೇಜಿನ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿಯವರು ನೆರವೇರಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಹಾಗೂ ಬೋಧಕ – ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಸಹ ಸಂಯೋಜನಾಧಿಕಾರಿ ರೇಷ್ಮಾ ಶೆಟ್ಟಿ ವಂದಿಸಿದರು.