ಕುಂದಾಪುರ: ಬಾಲ್ಯವಿವಾಹ ನಡೆಯುತ್ತಿದ್ದ ಕಲ್ಯಾಣ ಮಂಟಪಕ್ಕೆ ಅಧಿಕಾರಿಗಳಿಂದ ದಾಳಿ

ಕುಂದಾಪುರ: ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ಗುಡ್ಡೆಯಂಗಡಿ ಎಂಬಲ್ಲಿ ಬಾಲ್ಯವಿವಾಹ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬಾಲ್ಯ ವಿವಾಹವನ್ನು ತಡೆದಿದ್ದಾರೆ.

ತ್ರಾಸಿ ಮಹಾಗಣಪತಿ ಸಭಾಭವನದಲ್ಲಿ ತಲ್ಲೂರು ಗುಡ್ಡೆಯಂಗಡಿಯ 17 ವರ್ಷದ ಬಾಲಕಿಗೆ 28 ವರ್ಷದ ಹುಡುಗನೊಂದಿಗೆ ಮದುವೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಂಡು 200ಕ್ಕೂ ಹೆಚ್ಚು ಮಂದಿ ಮದುವೆ ಹಾಲ್ ನಲ್ಲಿ ಸೇರಿರುವ ಮಾಹಿತಿ ಬಂದ ಕೂಡಲೇ ಅಧಿಕಾರಿಗಳು ದಾಳಿ ನಡೆಸಿದ್ದರು.

ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕುಂದಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಗಂಗೊಳ್ಳಿ ಹಾಗೂ ಗ್ರಾಮ ಪಂಚಾಯತ್ ತ್ರಾಸಿ ಇಲ್ಲಿನ ಅಧಿಕಾರಿಗಳ ತಂಡ ಮದುವೆ ಹಾಲ್ ಗೆ ಹಠಾತ್ ಭೇಟಿ ನೀಡಿ ಬಾಲ್ಯವಿವಾಹವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕುಟುಂಬದ ಎರಡೂ ಕಡೆಯವರಿಗೂ ಬಾಲ್ಯವಿಹಾಹ ನಿಷೇಧ ಮತ್ತು ತಡೆಗಟ್ಟುವಿಕೆ ಕಾಯ್ದೆ ಬಗ್ಗೆ ಅರಿವು ಮೂಡಿಸಿದರು. ಕುಟುಂಬಿಕರಿಂದ ಮತ್ತು ಹಾಲ್ ಮಾಲೀಕರು ಮತ್ತು ಪುರೋಹಿತರಿನಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಯಿತು. ಮದುವೆಗೆ ಬಂದವರೆನ್ನೆಲ್ಲಾ ವಾಪಸು ಮನೆಗೆ ಕಳುಹಿಸಿ ಕೊಡಲಾಯಿತು. ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್.

ಕುಂದಾಪುರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ ಶೆಟ್ಟಿ,
ಕುಂದಾಪುರ ಅಂಗನವಾಡಿ ಮೇಲ್ವಿಚಾರಕಿ ಪ್ರಭಾವತಿ,  ಸುರಕ್ಷಾ ಸಮಾಜ ಕಾರ್ಯಕರ್ತೆ ಕಪಿಲ, ಸಹಾಯಕ ಉಪನಿರೀಕ್ಷಕ ರಘುರಾಮ, ಹೆಡ್ ಕಾನ್ಸ್ಟೇಬಲ್ ಮೋಹನ್ ಪೂಜಾರಿ, ಮಹಿಳಾ ಪೊಲೀಸ್ ಠಾಣೆಯ  ರೂಪ, ಶೋಭಾ, ಎಸ್ ಪಿ .ಡಿ .ಓ .ಶಿವಾನಂದ ಅಕೌಂಟಂಟ್, ಸಂದೀಪ್ ತ್ರಾಸಿ ಗ್ರಾಮ ಪಂಚಾಯತ್ .ಜಯಮಾಲಾ ಅಂಗನವಾಡಿ ಕಾರ್ಯಕರ್ತೆ ಗುಡ್ಡೆಯಂಗಡಿ ಭಾಗವಹಿಸಿದ್ದರು.