ಕುಂದಾಪುರ: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಂದಾಯ ನಿರೀಕ್ಷಕ

ಕುಂದಾಪುರ: ಭೂ ಪರಿವರ್ತನೆ ವೇಳೆ ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕರೊಬ್ಬರು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಘಟನೆ ಕುಂದಾಪುರದ ಕಂದಾಯ ಇಲಾಖೆಯ ಕಚೇರಿಯಲ್ಲಿ ಗುರುವಾರ ನಡೆದಿದೆ.

ಕುಂದಾಪುರದ ಕಂದಾಯ ನಿರೀಕ್ಷಕ ಭರತ್ ವಿ. ಶೆಟ್ಟಿ ₹ 5 ಸಾವಿರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ.

ಭರತ್ ಶೆಟ್ಟಿ ವ್ಯಕ್ತಿಯೊಬ್ಬರ ಬಳಿ ಭೂ ಪರಿವರ್ತನೆಗೆ ₹ 12 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಆ ವ್ಯಕ್ತಿ ಎಸಿಬಿಗೆ ದೂರು ನೀಡಿದ್ದರು. ಅದರಂತೆಯೇ ಇಂದು ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಲಂಚ ಪಡೆಯುತ್ತಿರುವಾಗಲೇ ಭರತ್ ನನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಎಸಿಬಿ ಉಡುಪಿ ಡಿವೈಎಸ್ಪಿ ಮಂಜುನಾಥ ಕವರಿ, ಇನ್ಸ್‌ಪೆಕ್ಟರ್ ಸತೀಶ್ ಬಿ.ಎಸ್., ಚಂದ್ರಕಲಾ, ಎಸಿಬಿ ಸಿಬ್ಬಂದಿಗಳಾದ ಯತೀನ್ ಕುಮಾರ್, ಪ್ರಸನ್ನ, ರವೀಂದ್ರ ಗಾಣಿಗ, ಅಬ್ದುಲ್ ಜಲಲ್, ರಾಘವೇಂದ್ರ ಹೊಸ್ಕೋಟೆ,ಸೂರಜ್, ಅಬ್ದುಲ್ ಲತೀಪ್, ಪ್ರತಿಮಾ ಮೊದಲಾದವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.