ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆ.

ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಶ್ಮಿ 57 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕುಸ್ತಿ ಪಟು ಆಗಿರುವ ಕೃಷ್ಣ ವಿದ್ಯಾರ್ಥಿನಿಗೆ ತರಬೇತಿ ನೀಡಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗೂ ಶುಭ ಹಾರೈಸಿದ್ದಾರೆ.