ಕುಂದಾಪುರ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ.

ಕುಂದಾಪುರ : ನವೆಂಬರ್ 19 ಮತ್ತು 20 ರಂದು ಚಾಮರಾಜನಗರದಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾವಳಿ ಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಬಾಲಕಿಯರ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ, ಬಾಲಕರ ವಿಭಾಗದಲ್ಲಿ ಸೃಜನ್ ದ್ವಿತೀಯ ಸ್ಥಾನ ಪಡೆದು ಅನನ್ಯ ಸಾಧನೆ ಮೆರೆದಿದ್ದಾರೆ.ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.