ಉಡುಪಿ: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಕೊರೊನಾ ಸೋಂಕಿತನ ವಿರುದ್ಧ ಎಫ್ ಐಆರ್ ದಾಖಲಾದ ಘಟನೆ ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವ್ರಾಡಿ ಗ್ರಾಮದಲ್ಲಿ ಇಂದು ನಡೆದಿದೆ.
ಕಾವ್ರಾಡಿ ಗ್ರಾಮದ ಕೊರೊನಾ ಪಾಸಿಟಿವ್ ಹೋಮ್ ಐಸೋಲೇಶನ್ ನಲ್ಲಿದ್ದ ಮಹಮ್ಮದ್ ಜಾಫರ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಮ್ಮದ್ ಜಾಫರ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಹೊರಗಡೆ ತಿರುಗಾಡುತ್ತಿದ್ದರು ಎಂಬ ದೂರು ಬಂದಿತ್ತು.
ಈ ಹಿನ್ನೆಲೆಯಲ್ಲಿ ಕುಂದಾಪುರ ಸಹಾಯಕ ಕಮಿಷನರ್ ಕಾವ್ರಾಡಿ ಗ್ರಾಮಕ್ಕೆ ಇಂದು ಭೇಟಿ ನೀಡಿ ಪರಿಶೀಲಿಸಿದಾಗ ಸೋಂಕಿತ ವ್ಯಕ್ತಿ ಪತ್ತೆ ಆಗಿದ್ದು, ಆತನ ವಿರುದ್ಧ ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಡಿ ಎಫ್ ಐಆರ್ ದಾಖಲಿಸಲು ಸೂಚಿಸಿದ್ದಾರೆ.
ಅದರಂತೆ ಕಾವ್ರಾಡಿ ಪಿಡಿಒ ಮಹಮ್ಮದ್ ಜಾಫರ್ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.