ಕುಂದಾಪುರ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ 

ಕುಂದಾಪುರ: ಕಳೆದ 10 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ವರದಿಯಾಗಿದೆ.
ಇಲ್ಲಿನ ಸರ್ಕಾರಿ ಆಸ್ಪತ್ರೆಯ ಹಿಂಬದಿಯ ನಿವಾಸಿ ಸುಜಾತ ಪ್ರಭು (68) ಎನ್ನುವವರು, ಮಾನಸಿಕ ಖಿನ್ನತೆ ಹಾಗೂ ತಲೆ ನೋವಿಗಾಗಿ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಗುರುವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಸಮೀಪದ ವೆಂಕಟೇಶ ಹೆಗ್ಡೆ ಎನ್ನುವವರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಅವರ ಪುತ್ರಿ ವಿಜಯಾ ಶೆಣೈ  ಎನ್ನುವವರು ಕುಂದಾಪುರ ಪೊಲೀಸರಿಗೆ ದೂರು ನೀಡಿದ್ದಾರೆ.