ಕುಂದಾಪುರ: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾ.ಹೆ. ತಲ್ಲೂರು ಸರ್ಕಲ್ ನಲ್ಲಿ ನಡೆದಿದೆ.
ಸಬ್ಲಾಡಿ ನಿವಾಸಿ ನೇತ್ರಾವತಿ ಮೊಗವೀರ (40) ಮೃತ ದುರ್ದೈವಿ. ಮೆಡಿಕಲ್ ನಿಂದ ಔಷಧಿ ತೆಗೆದುಕೊಂಡು ಮನೆಗೆ ತೆರಳುವ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಬಳಿಕ ಸ್ಪಲ್ಪ ದೂರದ ವರೆಗೆ ಎಳೆದುಕೊಂಡು ಹೋಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರ ಪತಿ ಈಗಾಗಲೇ ತೀರಿಕೊಂಡಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.