14ನೇ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ: ದ್ವಿತೀಯ ಸ್ಥಾನ ಪಡೆದ ಕುಂದಾಪುರ ಘಟಕದ ವಿದ್ಯಾರ್ಥಿಗಳು

ಗಂಗೊಳ್ಳಿ : ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇದರ ವತಿಯಿಂದ ಮೈಸೂರಿನಲ್ಲಿ ನಡೆದ 14ನೇ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಕುಂದಾಪುರ ಘಟಕ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಸ್ಪರ್ಧೆಯಲ್ಲಿ ಭಾಗವಹಿಸಿದ ಕುಂದಾಪುರ ತಾಲೂಕಿನ 60 ವಿದ್ಯಾರ್ಥಿಗಳ ಪೈಕಿ ವಿವಿಧ ವಿಭಾಗದಿಂದ 6 ವಿದ್ಯಾರ್ಥಿಗಳು ಪ್ರಥಮ ಹಾಗೂ 12 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯದ ವಿವಿಧೆಡೆಗಳಿಂದ ಸುಮಾರು 1500 ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.