ಉಡುಪಿ: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಇತ್ತೀಚೆಗೆ ಪ್ರೀತಿಸಿದ ಹುಡುಗನ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿಯೇ ಚೈತ್ರಾ ಕುಂದಾಪುರ-ಶ್ರೀಕಾಂತ್ ಕಶ್ಯಪ್ ಅವರ ಮದುವೆ ನಡೆದಿದೆ. ಆಪ್ತರನ್ನೆಲ್ಲಾ ಚೈತ್ರಾ ಕುಂದಾಪುರ ಮದುವೆಗೆ ಆಹ್ವಾನಿಸಿದ್ದರು. ವಿಪರ್ಯಾಸ ಎಂದರೆ ಸ್ವಂತ ತಂದೆಯನ್ನೇ ಚೈತ್ರಾ ಕುಂದಾಪುರ ಮದುವೆಗೆ ಕರೆದಿಲ್ಲವೆಂದು ಅವರ ತಂದೆ ಬಾಲಕೃಷ್ಣ ನಾಯ್ಕ್ ಸಾಲು ಸಾಲು ಆರೋಪವನ್ನು ಮಾಡಿದ್ದಾರೆ. ಚೈತ್ರಾ ಅವರ ನೂತನ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ಅವರ ತಂದೆ ಗಂಭೀರವಾದ ಆರೋಪಗಳನ್ನು ಮಾಡಿರುವುದು ದೊಡ್ಡ ಸದ್ದು ಮಾಡಿದೆ.
ಮಾಧ್ಯಮಗಳ ಜತೆ ಮಾತನಾಡಿರುವ ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು, ನನ್ನ ಮಗಳು ವಿವಾಹಕ್ಕೆ ನನಗೆ ಸರಿಯಾದ ಆಮಂತ್ರಣ ಕೊಟ್ಟಿಲ್ಲ. ಮಗಳ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು ಎಂದು ಆರೋಪಿಸಿದ್ದಾರೆ.
ನನ್ನ ಪತ್ನಿ ಕೂಡ ಮಗಳ ಬೆಂಬಲಕ್ಕೆ ನಿಂತಿದ್ದಾಳೆ. ಇವರು ಹಣದ ಆಸೆಗೆ ನನ್ನನ್ನು ದೂರವಿಟ್ಟಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲಿ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ ಎಂದಿದ್ದಾರೆ.
ಚೈತ್ರಾ ಮದುವೆ ಸಂದರ್ಭ ಆಕೆ ನನ್ನಲ್ಲಿ 5 ಲಕ್ಷ ರೂ. ಹಣ ಕೇಳಿದಳು. ನಾನು ಹೋಟೆಲ್‌ನಲ್ಲಿ ಕೆಲಸ ಮಾಡುವ ಸಾಮಾನ್ಯ ನೌಕರ. ಚೈತ್ರಾ ಮತ್ತು ಆಕೆಯ ತಾಯಿ ಹಣಕ್ಕಾಗಿ ನನ್ನನ್ನು ದೂರವಿಟ್ಟಿದ್ದಾರೆ. ಚೈತ್ರಾ ಪತಿ ನಮ್ಮ ಮನೆಯಲ್ಲಿ ಇದ್ದವನು. ಅವನು ಕೂಡ ಕಳ್ಳ. ಅವರಿಗೆ ಮಾನ ಮರ್ಯಾದೆ ಇಲ್ಲ. ಈಗ ನನ್ನ ಕುಟುಂಬದ ಮಾನ ಮರ್ಯಾದೆ ಕೂಡ ತೆಗೆದರು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥ. ಚೈತ್ರಾ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ. ಆಕೆಗೆ ಯಾರು ದೊಡ್ಡ ಸ್ಥಾನಮಾನ ಕೊಡಬೇಡಿ ಎಂದು ಬಾಲಕೃಷ್ಣ ನಾಯ್ಕ್, ಮಗಳು ಚೈತ್ರಾ ಕುಂದಾಪುರ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ.
ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ:
ಅವರಿಗೆ ಮಾನ ಮರ್ಯಾದೆ ಇಲ್ಲ. ನನ್ನ ಕುಟುಂಬದ ಮಾನ ಮರ್ಯಾದೆ ತೆಗೆದರು. ನಾನು ಸತ್ಯ, ನ್ಯಾಯ, ಧರ್ಮದಲ್ಲಿರುವ ವ್ಯಕ್ತಿ. ನನ್ನ ದೊಡ್ಡ ಮಗಳು ಶಾಲೆ ಕೆಲಸ ಮಾಡಿಕೊಂಡು ಹೊಲಿಗೆ ಮಾಡಿಕೊಂಡು ಗೌರವಾನ್ವಿತ ರೀತಿಯಲ್ಲಿ ಬದುಕುತ್ತಿದ್ದಾಳೆ. ನನ್ನ ದೊಡ್ಡ ಮಗಳ ಮೇಲೆಯೂ ಚೈತ್ರಾ ಸುಳ್ಳು ಅಪವಾದ ಹಾಕಿದ್ದಳು. ʻಬಿಗ್ ಬಾಸ್ʼ ವೇದಿಕೆಯಲ್ಲಿ ಎಲ್ಲಾ ಸತ್ಯ ಒಪ್ಪಿಕೊಳ್ಳಬಹುದಾಗಿತ್ತು. ನಾನೇ ಮನೆ ನಡೆಸುವವಳು ಎಂದು ಬಿಂಬಿಸಿಕೊಂಡಿದ್ದಾಳೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಈಕೆ ಹಣ ಹೊಡೆದಿರುತ್ತಾಳೆ. ಬೇರೆ ಬೇರೆ ಬ್ಯಾಂಕುಗಳಲ್ಲಿ ಪಡ್ಡೆ ಹುಡುಗರ ಹೆಸರಿನಲ್ಲೆಲ್ಲ ಡೆಪಾಸಿಟ್ ಮಾಡಿ ಬಾಂಡ್ ಮೇಲೆ ಸಾಲ ಪಡೆದಿದ್ದಳು. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ ಎಂದಿದ್ದಾರೆ ಬಾಲಕೃಷ್ಣ ನಾಯ್ಕ್ ಹೇಳಿದ್ದಾರೆ.
ಆಕೆ ನನ್ನ ಜೀವನದಲ್ಲಿ ಬರಲೇಬಾರದು. ಜನ ಆಕೆಗೆ ಮನ್ನಣೆ ಕೊಡಬಾರದು. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡುತ್ತಾಳೆ? ನನ್ನ ಹೆಂಡತಿಗೂ ಹಣ ಕೊಟ್ಟಿದ್ದಾಳೆ, ಅವಳಿಗೆ ಗಂಡ ಬೇಡ. ಗಂಡನ ಗೌರವ ನನ್ನ ಹೆಂಡತಿಗೂ ಬೇಡ. ಮಗಳಿಗೆ ಸಪೋರ್ಟ್ ಮಾಡ್ತಾಳೆ” ಎಂದು ಬಾಲಕೃಷ್ಣ ನಾಯ್ಕ್, ಮಗಳು ಚೈತ್ರಾ ಕುಂದಾಪುರ ವಿರುದ್ಧ ಆರೋಪಿಸಿದ್ದಾರೆ.












