udupixpress
Home Trending ಕುಂದಾಪುರದ ಮೊದಲ ಮಹಿಳಾ ಶಾಸಕಿ, ಹಿರಿಯ ಕಾಂಗ್ರೆಸ್ ನಾಯಕಿ ವಿನ್ನಿಫ್ರೆಡ್ ಫೆರ್ನಾಂಡಿಸ್ ನಿಧನ

ಕುಂದಾಪುರದ ಮೊದಲ ಮಹಿಳಾ ಶಾಸಕಿ, ಹಿರಿಯ ಕಾಂಗ್ರೆಸ್ ನಾಯಕಿ ವಿನ್ನಿಫ್ರೆಡ್ ಫೆರ್ನಾಂಡಿಸ್ ನಿಧನ

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕಿ ವಿನ್ನಿಫ್ರೆಡ್ ಫೆರ್ನಾಂಡಿಸ್ (92) ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅವರು ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ವಿನ್ನಿಫ್ರೆಡ್ ಫೆರ್ನಾಂಡಿಸ್ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಹಾಗೆಯೇ ಕುಂದಾಪುರ ಪುರಸಭೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಒಂದು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿಯೂ ಅವರು ಆಯ್ಕೆಯಾಗಿದ್ದರು.

error: Content is protected !!