ಕುಂದಾಪುರ : ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ  ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಬಸ್ ನಿಲ್ದಾಣ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‍ಗಳು, ಬಾರ್ ಮತ್ತು ರೆಸ್ಟೋರೆಂಟ್‍ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 39 ಪ್ರಕರಣ ದಾಖಲಿಸಿ 4800 ರೂ. ದಂಡ ವಸೂಲಿ ಮಾಡಲಾಗಿದೆ. ಅದರಂತೆ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ಈ ದಾಳಿಯಲ್ಲಿ ವಿತರಿಸಲಾಯಿತು. ಹಾಗೂ ಎಲ್ಲಾ ಅಂಗಡಿ, ಹೋಟೇಲ್‍ಗಳಲ್ಲಿ ಆಹಾರ ಸುರಕ್ಷತಾ ಪರವಾನಿಗೆಯನ್ನು ಪರೀಕ್ಷಿಸಲಾಯಿತು.

    ದಾಳಿಯಲ್ಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ, ನಾಗಭೂಷಣ್ ಉಡುಪ, ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಉಮೇಶ್, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಆನಂದ ಗೌಡ, ಹಿರಿಯ ಆರೋಗ್ಯ ಸಹಾಯಕ ಸದಾನಂದ ಹೆಬ್ಬಾರ್, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ದತ್ತಾತ್ರೇಯ, ಜಿಲ್ಲಾ ಎನ್.ಸಿ.ಡಿ ಘಟಕದ ಜಿಲ್ಲಾ ಸಲಹೆಗಾರ ಡಾ.ಆಫನ್, ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ, ಎನ್.ಟಿ.ಸಿ.ಪಿ. ಸಮಾಜಕಾರ್ಯಕರ್ತೆ ಶೈಲಾ ಎಸ್. ಎಮ್., ಡಾ. ಶಿಜಿನಿ, ಆರತಿ ರಾಜೀವ್,  ಪೋಲೀಸ್ ಠಾಣೆಯ ಆರಕ್ಷಕ ತಾರಾನಾಥ್, ವಾಹನ ಚಾಲಕರಾದ ಪ್ರಸಾದ್ ಹಾಗೂ ಸತೀಶ್ ಉಪಸ್ಥಿತರಿದ್ದರು.