ಕುಂದಾಪುರ: ನೆಹರು ಯುವಕೇಂದ್ರ ಉಡುಪಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ‘ಯುವ ಉತ್ಸವ-ಯುವ ಸಂವಾದ’ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಅ. 21 ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣಮ್ಯ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು , ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.