ಕುಂದಾಪುರ: 2022-2023 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನೇಹಾ ಜೆ. ರಾವ್ ವಿಜ್ಞಾನ ವಿಭಾಗದಲ್ಲಿ 594 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ, ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು , ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.
 
								 
															





 
															 
															 
															











