ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಶಿಫಾನ್ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಸೆಪ್ಟೆಂಬರ್ 01 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡದಲ್ಲಿ ಪ್ರತಿನಿಧಿಸಿದ ವಿದ್ಯಾರ್ಥಿ ಶಿಫಾನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.