ಕುಂದಾಪುರ: ಸೆಪ್ಟೆಂಬರ್ 04 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಯ ಅನಾವರಣಕ್ಕಾಗಿ ಸಾಂಸ್ಕೃತಿಕ ತೇರು, ಕಲೆಗಳ ಮೇರು ಶೀರ್ಷಿಕೆಯಡಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನೆರವೇರಿತು.
ದೀಪ ಪ್ರಜ್ವಲನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆ ಜಗದಗಲ ಪಸರಿಸುವಂತಾಗಲಿ ಎನ್ನುವ ಸದಾಶಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಜಾನಪದ ಅಕಾಡೆಮಿ ಪುರಸ್ಕೃತರಾದ ಡಾ. ಗಣೇಶ್ ಗಂಗೊಳ್ಳಿ ಅವರು ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಕಲೆ, ಸಂಸ್ಕೃತಿ ಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಶ್ರೀ. ಕೆ. ರಾಧಾಕೃಷ್ಣ ಶೆಣೈಯವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ರಸಾಯನಶಾಸ್ತ್ರ ಉಪನ್ಯಾಸಕರಾದ ರಮಾಕಾಂತ್ ರೇವಣಕರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವೈವಿಧ್ಯಮಯ ಪ್ರತಿಭೆಗಳ ಪ್ರದರ್ಶನ ನೆರವೇರಿತು.ಇದು ಕೇವಲ ಸ್ಪರ್ಧೆಯಾಗಿರದೆ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಕಲಾಪ್ರತಿಭೆಯನ್ನು ಪ್ರದರ್ಶಿಸುವ ವೇದಿಕೆಯಾಗಿತ್ತು.ವಿದ್ಯಾರ್ಥಿಗಳಾದ ಪಂಚಮಿ ಅತಿಥಿಯವರನ್ನು ಪರಿಚಯಿಸಿ, ಅದಿತಿ ವಂದಿಸಿ, ಬ್ರೆಂಡನ್ ಸ್ವಾಗತಿಸಿ, ಮಂಜುಶ್ರೀ ಕಾರ್ಯಕ್ರಮ ವನ್ನು ನಿರೂಪಿಸಿದರು.












