ಟೆನ್ನಿ ಕೋಯಿಟ್, ಥ್ರೋ ಬಾಲ್ ಹಾಗೂ ಹ್ಯಾಂಡ್ ಬಾಲ್ ಪಂದ್ಯಾಟ: ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ರಿಷಾ, ಅಪೂರ್ವ, ಪವನ್ ತಮ್ಮ ಅಪೂರ್ವ ಸಾಧನೆ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಥ್ರೋ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳಾದ ಸೋಹನ್ ಖಾರ್ವಿ ಮತ್ತು ಪ್ರೀತಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ತೆಂಕನಿಡಿಯೂರು ಪದವಿ ಪೂರ್ವ ಕಾಲೇಜು ಉಡುಪಿ ಇದರ ಜಂಟಿ ಆಶ್ರಯ ದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರೋಹಿತ್ ಎನ್. ಶೇಟ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.