ಕುಂದಾಪುರ : ನವೆಂಬರ್ 19 ರಂದು ಉಡುಪಿ ಜಿಲ್ಲಾ ಮಟ್ಟದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಹಂತದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಜಾನಪದ ಗೀತೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆಕಾಂಕ್ಷಾ ಭಾವಗೀತೆ ಸ್ಪರ್ಧೆ ಯಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಥಮ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ T. A ಕನ್ನಡ ಪ್ರಬಂಧ ದಲ್ಲಿ ತೃತೀಯ ಸ್ಥಾನ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕಶಿಶ್ ಆಂಗ್ಲ ಭಾಷಾ ಚರ್ಚಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.


















