ಕುಂದಾಪುರ: ಸೆಪ್ಟೆಂಬರ್ 02 ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಉಡುಪಿ ಜಿಲ್ಲೆ ಹಾಗೂ ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗ ದ ವಿದ್ಯಾರ್ಥಿ ಅಕ್ಷಯ್ ಕುಮಾರ್ 82 ಕೆಜಿ ವಿಭಾಗ ದಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಗಳಾದ ಅಝೀಮ್, ವಿಘ್ನೇಶ್ ಪ್ರಭು, ಸ್ಯಾವಿಯೋ, ವಿವೇಕ್, ವಿಶಾಖ್ ಬೆಳ್ಳಿ ಪದಕ ಪಡೆದಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ.ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ,ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.












