ಕುಂದಾಪುರ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ಹಾಗೂ ಕುಂದಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಥ್ರೋಬಾಲ್ ಪಂದ್ಯಾಟ ದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಸಾಧನೆ ಮೆರೆದಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋದಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.












