ಕುಂದಾಪುರ ಕಳೆದ ಮೂರು ವರ್ಷಗಳಿಂದ ಸತತವಾಗಿ ಶೇ.100 ಫಲಿತಾಂಶ ದಾಖಲಿಸುವಲ್ಲಿ ಯಶಸ್ವಿಯಾಗಿರುವ ಕುಂದಾಪುರದ ಶ್ರೀವೆಂಕಟರಮಣ ಪದವಿಪೂರ್ವ ಕಾಲೇಜು ಈ ಬಾರಿಯೂ ಅದೇ ಸ್ಥಾನ ಕಾಯ್ದುಕೊಂಡಿದೆ.
ವಾಣಿಜ್ಯ ವಿಭಾಗದಲ್ಲಿ ಕುಂದಾಪುರದ ಸ್ವಾತಿ ಪೈ(594) ಅಂಕಗಳಿಸಿ ರಾಜ್ಯಕ್ಕೆ 4ನೇ ಸ್ಥಾನ ಗಳಿಸುವುದರೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸೋಹನ್ ಕುಮಾರ್ ಶೆಟ್ಟಿ(589) ಅಂಕಗಳಿಸಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಭುವನ್(588) ಅಂಕಗಳಿಸಿ 8ನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 84 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 45 ಮಂದಿ ವಿಶೇಷ ಶ್ರೇಣಿಯಲ್ಲಿ ಮತ್ತು 39 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 118 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 63 ಮಂದಿಗೆ ವಿಶೇಷ ಶ್ರೇಣಿಯಲ್ಲಿ ಮತ್ತು 55 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.