ಜೆಇಇ ಮೈನ್ಸ್ ನಲ್ಲಿ ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಜರುಗಿದ 2023 ನೇ ಸಾಲಿನ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ನಿತೇಶ್ 94.58 ಪರ್ಸೆಂಟೈಲ್, ಪ್ರಣಮ್ಯ 91.82 ಪರ್ಸೆಂಟೈಲ್, ಸನತ್ 90.60 ಪರ್ಸೆಂಟೈಲ್, ಕಾರ್ತಿಕ್ 88.46 ಪರ್ಸೆಂಟೈಲ್,ರಿಷಿ 87.58 ಪರ್ಸೆಂಟೈಲ್, ನಾಗರಾಜ್ 85.93 ಪರ್ಸೆಂಟೈಲ್ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.