ಬೆಂಗಳೂರು: ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಅವರ ಮಗಳು ( ದಿ. ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ) ಕುಸುಮಾ ರವಿ ಭಾನುವಾರ ಕಾಂಗ್ರೆಸ್ ಸೇರಿದ್ದು, ಅವರು ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗುವುದು ಬಹುತೇಕ ಖಚಿತಗೊಂಡಿದೆ ಎಂದು ತಿಳಿದುಬಂದಿದೆ.
ಕಳೆದ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣಕ್ಕೆ ಹನುಮಂತರಾಯಪ್ಪ ಅವರು ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರಿದ್ದರು. ಅವರು ಮಗಳನ್ನು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಉಪ ಚುನಾವಣೆಗೆ ಈಗಾಗಲೇ ಪೂರ್ವ ತಯಾರಿ ಮಾಡಿದ್ದೇವೆ. ಆರ್.ಆರ್. ನಗರ ಮತ್ತು ಶಿರಾ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡುತ್ತೇವೆ ಎಂದರು