ಕುವೈತ್‌ನಲ್ಲಿ ಸಂಕಷ್ಟದಲ್ಲಿರುವ ಮಂಗಳೂರಿನ ಯುವಕರು:ಸಮಸ್ಯೆ ಬಗೆಹರಿಸಲಾಗುವುದು ಎಂದ ಡಿ.ವಿ.ಎಸ್

ಮಂಗಳೂರು: ಮಾಣಿಕ್ಯ ಅಸೋಸಿಯೇಟ್ಸ್ ಪ್ಲೇಸ್’ಮೆಂಟ್ ಕಂಪೆನಿ ನಗರದ 34 ಮಂದಿ ಯುವಕರನ್ನು ವಿದೇಶಕ್ಕೆ ಕರೆದೊಯ್ದು ಸೂಕ್ತ ಉದ್ಯೋಗ ಕಲ್ಪಿಸದೆ ವಂಚಿಸಿದ ಘಟನೆ ಈಗಾಗಲೇ ಜನಾಕ್ರೋಶಕ್ಕೆ ಕಾರಣವಾಗಿ ಸುದ್ದಿಯಲ್ಲಿರುವ ಬೆನ್ನಲ್ಲೇ ಡಿ.ವಿ.ಸದಾನಂದ ಗೌಡ  ಈ ಘಟನೆಗೆ ಪ್ರತಿಕ್ರಿಯಿಸಿದ್ದು ಕುವೈತ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಭಾರತೀಯರ ಬಗ್ಗೆ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಲಾಗಿದೆ. ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುತ್ತದೆ. ಈ ಬಗ್ಗೆ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರಿಗೂ ತಿಳಿಸಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮಾಣಿಕ್ಯ ಅಸೋಸಿಯೇಟ್ಸ್ ಪ್ಲೇಸ್’ಮೆಂಟ್ ಎಂಬ ಕಂಪೆನಿಯಿಂದ ವಂಚನೆಗೊಳಗಾದ 34 ಮಂದಿ ಮಂಗಳೂರಿನ ಯುವಕರು ಕಳೆದ 6 ತಿಂಗಳಿನಿಂದ ಕುವೈತ್’ನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಕುವೈತ್’ನಲ್ಲಿ ಕೆಲಸ‌ ಕೊಡಿಸುವುದಾಗಿ ನಂಬಿಸಿದ್ದ ಪ್ರಸಾದ್ ಶೆಟ್ಟಿ ಎನ್ನುವ ವ್ಯಕ್ತಿಯೊಬ್ಬರಿಂದ  65 ಸಾವಿರ ರೂಪಾಯಿ ವಸೂಲಿ ಮಾಡಿದ್ದಾನೆ. ಆದರೆ, ಕುವೈತ್’ಗೆ ತೆರಳಿದ್ದ ಯುವಕರು ಮಾತ್ರ ಸರಿಯಾದ ಕೆಲಸ‌ ದೊರೆಯದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.