ಮತದಾನದ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಆದೇಶ

ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಮೇ 10 ರಂದು ಚುನಾವಣೆ ನಿಗದಿಪಡಿಸಿದ್ದು, ಸದರಿ ದಿನದಂದು ಜಿಲ್ಲೆಯಾದ್ಯಂತ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು, 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ ಕಾಯ್ದೆ-1963 ಕಲಂ 3(ಎ) ಅನ್ವಯ ಅರ್ಹ ಕಾರ್ಮಿಕ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಿ, ಮತ ಚಲಾಯಿಸಲು ಅನುವು ಮಾಡಿ ಕೊಡಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆಗಳ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.