ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ವೆಂಟಿಲೇಟರ್, ಹಾಸಿಗೆಗಳ ಕೊರತೆ: ದೃಢೀಕರಿಸಿಕೊಂಡು ಬರುವಂತೆ ಸೂಚನೆ

ಮಣಿಪಾಲ: ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಇದರಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕ (ಐಸಿಯು) ದಾಖಲಾಗುತ್ತಿರುವ ರೋಗಿಗಳ ಸಂಖ್ಯೆಯೂ ಹೆಚ್ಚಳವಾಗಿದೆ. ಇದರಿಂದ ಐಸಿಯುನಲ್ಲಿ ಹಾಸಿಗೆಗಳು ಮತ್ತು ವೆಂಟಿಲೇಟರ್ ತೀವ್ರ ಕೊರತೆಯಂಟಾಗಿದೆ.

ಆದ್ದರಿಂದ ಎಲ್ಲಾ ಆಸ್ಪತ್ರೆಗಳು, ನರ್ಸಿಂಗ್ ಹೋಮ್ಸ್, ರೋಗಿಗಳು / ರೋಗಿಗಳ ಆರೈಕೆದಾರರು, ಆಂಬ್ಯುಲೆನ್ಸ್, ಸೇವಾ ಪೂರೈಕೆದಾರರು ತಮ್ಮ ಸ್ಥಳದಿಂದ ಹೊರಡುವ ಮುನ್ನ ದೂರವಾಣಿ ಸಂಖ್ಯೆ 96866 92603 ಗೆ ಕರೆ ಮಾಡುವುದರ ಮೂಲಕ, ಕಸ್ತೂರ್ಬಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕ (ಐಸಿಯು) ಹಾಸಿಗೆಗಳು ಮತ್ತು ವೆಂಟಿಲೇಟರ್ ಹಾಸಿಗೆಗಳು ಲಭ್ಯವಿದೆಯೇ ಎಂದು ದೃಢೀಕರಿಸಿಕೊಂಡು ಆಸ್ಪತ್ರೆಗೆ ಬರಲು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಅವರು ವಿನಂತಿಸಿಕೊಂಡಿದ್ದಾರೆ.

ಐಸಿಯು ಹಾಸಿಗೆಗಳು ಮತ್ತು ವೆಂಟಿಲೇಟರುಗಳ ತೀವ್ರ ಕೊರತೆಯ ದೃಷ್ಟಿಯಿಂದ ಈ ಕರೆ ಮತ್ತು ದೃಢೀಕರಣವು ಅವಶ್ಯಕವಾಗಿದೆ. ಇದರಿಂದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ತಮ್ಮ ರೋಗಿಗಳಿಗೆ ಆಗುವ ಅನಾನುಕೂಲತೆಯನ್ನು ತಪ್ಪಿಸಬಹುದಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಅವರು ಕೋರಿದ್ದಾರೆ.