₹1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲೇಡಿ ಸಬ್ ಇನ್ಸ್‌ಪೆಕ್ಟರ್, ಹೆಡ್ ಕಾನ್ ಸ್ಟೆಬಲ್

ಬೆಂಗಳೂರು: ಪ್ರಕರಣವೊಂದರಲ್ಲಿ‌ ಎಫ್ಐಆರ್ ದಾಖಲಿಸುವ ವಿಚಾರಕ್ಕೆ ಸಂಬಂಧಿಸಿ ದೂರುದಾರರಿಂದ ₹ 1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೇಡಿ ಸಬ್ ಇನ್ಸ್‌ಪೆಕ್ಟರ್ ಮತ್ತು ಹೆಡ್ ಕಾನ್ ಸ್ಟೆಬಲ್ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದ ಘಟನೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ನಡೆದಿದೆ.

ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸೌಮ್ಯಾ ಮತ್ತು ಹೆಡ್ ಕಾನ್ ಸ್ಟೆಬಲ್ ಜೆ.ಪಿ. ರೆಡ್ಡಿ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಠಾಣೆಯಲ್ಲೇ ಲಂಚದ ಹಣ ಪಡೆಯುತ್ತಿದ್ದಾಗ ದಾಳಿಮಾಡಿದ ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿದ್ದಾರೆ.

ಪಿಎಸ್ಐ ಸೌಮ್ಯಾ ಲಂಚದ ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ಠಾಣೆಯೊಳಕ್ಕೆ ದಾಳಿ ಮಾಡಿದರು.‌ ಆಗ ಇನ್ನೊಬ್ಬ ಆರೋಪಿ ಜೆ.ಪಿ. ರೆಡ್ಡಿ ಸೇರಿದಂತೆ ಕೆಲವು ಕಾನ್ಸ್ಟೆಬಲ್ ಗಳು ಠಾಣೆಯಲ್ಲಿದ್ದರು. ಒಬ್ಬರು ಭಯದಿಂದ ಓಡಿಹೋಗಲು ಯತ್ನಿಸಿ ಜಾರಿ ಬಿದ್ದಿದ್ದಾರೆ. ಅವರ ಕಾಲಿಗೆ ಪೆಟ್ಟಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.