ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀಮ೦ಜುನಾಥ ಸ್ವಾಮಿಯ ಆಲಯದಲ್ಲಿ ಲಕ್ಷದೀಪೋತ್ಸವದ ಸಂಭ್ರಮ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಶ್ರೀಮ೦ಜುನಾಥ ಸ್ವಾಮಿ ದೇವಾಲಯದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಲಕ್ಷದೀಪೋತ್ಸವಕ್ಕೆ ಶನಿವಾರದ೦ದು ಚಾಲನೆ ನೀಡಲಾಗಿದೆ.

ಶನಿವಾರದಂದು ಬೆಳಿಗ್ಗೆ ಶ್ರೀಮ೦ಜುನಾಥೇಶ್ವರ ಪ್ರೌಢಶಾಲೆಯ ಕ್ರೀಡಾ೦ಗಣದಲ್ಲಿ ಏರ್ಪಡಿಸಲಾದ ವಸ್ತುಪ್ರದರ್ಶನವನ್ನು ಬೆಳ್ತ೦ಗಡಿಯ ಶಾಸಕ ಹರೀಶ್ ಪೂ೦ಜ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇ೦ದ್ರ ಹೆಗ್ಡೆಯವರು ಉದ್ಘಾಟಿಸಿದ್ದರು.

ಸೋಮವಾರದಂದು ದೇವಾಲಯ ಮತ್ತು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಗೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ(ಬೈರತಿ) ಶಂಕುಸ್ಥಾಪನೆ ನೆರವೇರಿಸಿದ್ದಾರೆ.

Image

ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಲಕ್ಷದೀಪೋತ್ಸವವನ್ನು ಆಚರಿಸಲಾಗುತ್ತಿದ್ದು, ಭಕ್ತರು ಸಹಸ್ರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ದೇವಸ್ಥಾನದ ಮುಖ್ಯದ್ವಾರವನ್ನು ವಿವಿಧ ಹೂವುಗಳಿಂದ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಅಣ್ಣಪ್ಪ ಬೆಟ್ಟ, ಗೋಮ್ಮಟಬೆಟ್ಟ ಸೇರಿದ೦ತೆ ದೇವಸ್ಥಾನ ಸುತ್ತಲೂ ಝಗಮಗಿಸುತ್ತಿರುವ ವಿದ್ಯುತ್ ದೀಪಗಳ ಸಾಲುಗಳು ಕಣ್ಮನ ತಣಿಸುವಂತಿವೆ.

Image

ನವೆಂಬರ್ 22ರಂದು 90ನೇ ವರ್ಷದ ಸರ್ವಧರ್ಮ ಸಮ್ಮೇಳನ ನಡೆಯಲಿದೆ. ನವೆಂಬರ್ 23ರಂದು ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ನಾಡಿನ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಚಿತ್ರ: ಲವೀನ್.ಎಸ್. ಕೋಟ್ಯಾನ್