ಪಾಟ್ನಾ: ಇದೇ ನವೆಂಬರ್ 9ರಂದು ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಅವರು ಜಾಮೀನು ದೊರಕಿ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ. ಅವರು ಹೊರಗೆ ಬರುತ್ತಿದ್ದಂತೆಯೇ ಮರುದಿನ ಅಂದರೆ ನ. 10ರಂದು ಬಿಹಾರ ಮುಖ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬಿಹಾರದ ಜನತೆ ಬೀಳ್ಕೊಡುಗೆಯೊಂದಿಗೆ ಮನೆಗೆ ಕಳುಹಿಸುತ್ತಾರೆ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಲೇವಡಿ ಮಾಡಿದರು.
ಆಹಾರ ಹಗರಣ ಕೇಸ್ ನಲ್ಲಿ ಲಾಲೂ ಪ್ರಸಾದ್ ಯಾದವ್ ಜಾರ್ಖಂಡ್ ನ ರಾಂಚಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚಿಗೆ ಚೈಬಾಸ ಖಜಾಂಜಿ ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಹೈಕೋರ್ಟ್ ನಿಂದ ಅವರಿಗೆ ಜಾಮೀನು ದೊರೆತಿದೆ. ಆದರೆ, ಡುಮ್ಕಾ ಖಜಾನೆ ವಂಚನೆ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ಅವರು ಜೈಲಿನಿಂದ ಹೊರಗೆ ಬರಲು ಆಗಿಲ್ಲ.
ಲಾಲೂ ಜಾಮೀನು ಪಡೆದು ನವೆಂಬರ್ 9 ರಂದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ, ನಿತೀಶ್ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಲಿದ್ದಾರೆ ಎಂದು ಚುನಾವಣಾ ಪ್ರಚಾರ ಸಭೆಯಲ್ಲಿ ತೇಜಸ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಹಾರದಲ್ಲಿ ನವೆಂಬರ್ 28, ನವೆಂಬರ್ 3 ಮತ್ತು ನವೆಂಬರ್ 7 ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 10 ರಂದು ಮತಗಳ ಎಣಿಕೆ ನಡೆಯಲಿದೆ.