ಹೆಬ್ರಿ: ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಈಚರ್ ಲಾರಿಯೊಂದು ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಸಂಭವಿಸಿದೆ.
ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿ ಘಾಟಿ ರಸ್ತೆಯ 5ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಇದರಿಂದ ನಾಲ್ವರು ಮೃತಪಟ್ಟಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟ ನಾಲ್ವರು ಕಾರ್ಕಳ ತಾಲೂಕಿನ ಮಿಯ್ಯಾರು ಮೂಲದವರು ಎಂದು ತಿಳಿದುಬಂದಿದೆ. ಸ್ಥಳಕ್ಕಾಗಮಿಸಿದ ಹೆಬ್ರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.


















