ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪಿ.ಎಂ ಕಿಸಾನ್ ಬೀಮಾ ಯೋಜನೆಯ ಆರ್ಥಿಕ ಸೌಲಭ್ಯ ಪಡೆಯಲು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸಿಕೊಳ್ಳದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲ.
ಜಿಲ್ಲೆಯ ರೈತರಿಗೆ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಈಗಾಗಲೇ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕೆಲ ರೈತ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಇ-ಕೆವೈಸಿ ಮಾಡಿಸಿಕೊಳ್ಳಲು ಇದು ಕೊನೆಯ ಅವಕಾಶವಾಗಿದ್ದು, ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.