ಸಾರ್ವಜನಿಕರಿಂದ ಅಂತಿಮ ದರ್ಶನ : ಅಂಬೇಡ್ಕರ್​ ಮೈದಾನದಲ್ಲಿ ನಟಿ ಲೀಲಾವತಿ ಪಾರ್ಥಿವ ಶರೀರ

ಮುಂಜಾನೆ 5:30 ರಿಂದ 10:30ರ ವರೆಗೂ ಸಾರ್ವಜನಿಕರು ಆಗಮಿಸಿ ನಟಿಯ ಅಂತಿಮ ದರ್ಶನ ಪಡೆದರುರವೀಂದ್ರ ಕಲಾಕ್ಷೇತ್ರಕ್ಕೂ ಮುನ್ನ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ನಟಿ ಪಾರ್ಥಿವ ಶರೀರ ಇರಿಸಲಾಗಿತ್ತು. .

. ಈಗಾಗಲೇ ಚಿತ್ರರಂಗದ ಹಲವರು ನಟಿಯ ಅಂತಿಮ ದರ್ಶನ ಪಡೆದಿದ್ದಾರೆ. ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು, ಸಾರ್ವಜನಿಕರು ಬರುತ್ತಿದ್ದಾರೆ. ಬಳಿಕ ಅಲ್ಲಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥೀವ ಶರೀರವನ್ನು ತರಲಾಯಿತು. ರವೀಂದ್ರ ಕಲಾಕ್ಷೇತ್ರದ ಬಯಲು ರಂಗಮಂದಿರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 2:30 ರವರೆಗೆ ದರ್ಶನಕ್ಕೆ ಅವಕಾಶವಿದೆ. ನಂತರ, ಸೋಲದೇವನಹಳ್ಳಿಯಲ್ಲಿರುವ ಲೀಲಾವತಿಯವರ ತೋಟದಲ್ಲೇ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲು ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ಮಾಹಿತಿ ನೀಡಿದ್ದಾರೆ. ಅಂತಿಮ ದರ್ಶನದ ಸ್ಥಳದಲ್ಲಿ ಕುಟುಂಬಸ್ಥರು ಹಾಜರಿದ್ದಾರೆ