ಉಡುಪಿ: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು,ಸಂಸದೀಯ ವ್ಯವಹಾರ,ಶಾಸನ
ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್ ಅವರು ಆಗಸ್ಟ್ 5 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಆಗಸ್ಟ್ 4 ರಂದು ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದು, ಆಗಸ್ಟ್ 5 ರಂದು ಬೆಳಗ್ಗೆ 10.30 ಕ್ಕೆ, ಬಹ್ಮಾವರದಲ್ಲಿ ನೂತನವಾಗಿ ಸೃಜಿಸಲ್ಪಟ್ಟ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ, 4.30 ಕ್ಕೆ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ, ಮಾನವ ಹಕ್ಕುಗಳ ಸಂರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷರೊಂದಿಗೆ ಸಭೆ. ಸಂಜೆ 7.30 ಕ್ಕೆ ಉಡುಪಿಯಿಂದ ತೆರಳಲಿದ್ದಾರೆ.