ನ್ಯಾಯವಾದಿ ಗಿರೀಶ್ ಐತಾಳ್ ರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ

ಉಡುಪಿ: ಆರ್ಯಭಟ ಕಲ್ಚರಲ್ ಆರ್ಗನೈಜೇಶನ್‌ ಸಂಸ್ಥೆ ವತಿಯಿಂದ ಕೊಡ ಮಾಡುವ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಉಡುಪಿ ನ್ಯಾಯಲಯದಲ್ಲಿ 18 ವರ್ಷಗಳಿಂದ ನ್ಯಾಯವಾದಿಯಾಗಿ, 16 ಸಂಸ್ಥೆಗಳಿಗೆ ಕಾನೂನು ಸಲಹೆಗಾರರಾಗಿ ಸೇವೆ ಸಲ್ಲಿಸುವುದರೊಂದಿಗೆ ಸಮಾಜ ಸೇವೆಗೈದ ನ್ಯಾಯಾವಾದಿ ಬಿ. ಗಿರೀಶ್‌ ಐತಾಳ್‌ ಅವರಿಗೆ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ  ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಿ ಸಮ್ಮಾನಿಸಲಾಯಿತು.
ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ| ಎಚ್.ಎಲ್.ಎನ್‌. ರಾವ್‌, ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾ| ಡಾ| ಎಚ್.ಎನ್‌. ನಾಗಮೋಹನ್‌ ದಾಸ್‌, ನಾಡೋಜ ಡಾ| ಮಹೇಶ್‌ ಜೋಶಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ. ಚಿನ್ನೇಗೌಡ ಉಪಸ್ಥಿತ ರಿದ್ದರು.