ಸಾಮಾಜಿಕ ಜಾಲತಾಣದಲ್ಲಿ ಜಾತಿನಿಂದನೆ ಮಾಡಿದ ಆರೋಪ; ವಕೀಲ ಜಗದೀಶ್ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಜಾತಿನಿಂದನೆ ಮಾಡಿದ ಆರೋಪ ಮಾಡಿದ ಆರೋಪದ ಮೇಲೆ ವಕೀಲ ಜಗದೀಶ್ ಅವರನ್ನು ಶುಕ್ರವಾರದಂದು ನಗರಲದಲ್ಲಿರುವ ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಜಗದೀಶ್ ಅವರು ಜಾತಿ ನಿಂದನೆ ಮಾಡಿದ್ದಾರೆ ಎಂದು ಮಂಜುನಾಥ್ ಎಂಬವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಬಿಎನ್‍ಎಸ್ 196 ಮತ್ತು 299 ಅಡಿಯಲ್ಲಿ ಜಗದೀಶ್ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.

ಗುರುವಾರ ನೋಟಿಸ್ ನೀಡಲು ಜಗದೀಶ್ ಅವರ ಮನೆಗೆ ಪೊಲೀಸರು ಹೋದಾಗ ಬಾಗಿಲು ತೆಗೆಯದೆ ನೊಟೀಸ್ ಪಡೆದುಕೊಳ್ಳಲು ನಿರಾಕರಿಸಿದ್ದರು. ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಪೊಲೀಸರು ಜಗದೀಶ್ ಅವರನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ಲಾಯರ್ ಜಗದೀಶ್ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.