ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ಕಟ್ಟುನಿಟ್ಟಿನ ಮಾರ್ಗಸೂಚಿಯೊಂದಿಗೆ ಜೂನ್ 14ರ ವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕೊರೊನಾ ಸರಪಳಿಯನ್ನು ಇನ್ನೂ ಸಂಪೂರ್ಣವಾಗಿ ಬ್ರೇಕ್ ಮಾಡಲು ಸಾಧ್ಯವಾಗಿಲ್ಲ. ಅಲ್ಲದೆ, ಹಳ್ಳಿಗಳಲ್ಲಿಯೂ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಆದ್ದರಿಂದ ಒಂದು ವಾರ ಕಾಲ ಲಾಕ್ಡೌನ್ ಮುಂದುವರಿಯುತ್ತದೆ ಎಂದು ಘೋಷಣೆ ಮಾಡಿದ್ದಾರೆ.
ಹೋಟೆಲ್ ಗಳಿಗೆ ರಿಲೀಫ್:
ಹೋಟೆಲ್ ಗಳಿಗೆ ಸಂಜೆ 7ರ ವರೆಗೆ ಪಾರ್ಸೆಲ್ ನೀಡಲು ಅವಕಾಶ ನೀಡಲಾಗಿದೆ. ಅಲ್ಲದೆ, ಇಂದಿನಿಂದಲೇ (ಜೂನ್ 3) ಕೈಗಾರಿಕೆಗಳಿಗೆ ರಫ್ತು ಮಾಡಲು ಅನುಮತಿ ನೀಡಲಾಗಿದೆ.
ಇದೇ ವೇಳೆ 500 ಕೋಟಿಗಳ 2ನೇ ಪ್ಯಾಕೇಜ್ ಘೋಷಣೆ ಮಾಡಿದರು.