ಉಡುಪಿ: ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ಹಿಂದಿ ವಿಭಾಗದ ವತಿಯಿಂದ ಹಿಂದಿ ಭಾಷೆಯ ಪ್ರಾಮುಖ್ಯತೆ ಮತ್ತು ಪ್ರಯೋಜನಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಪಿ.ಜಿ ಎ.ವಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ, ಡಾ. ಸುಕನ್ಯಾ ಮೇರಿ ಜೆ, ಹಿಂದಿ ಭಾಷೆ ಕಲಿಯುವುದರಿಂದ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ವೃತ್ತಿಯನ್ನು ಪಡೆದುಕೊಳ್ಳಲು ಸಾಧ್ಯ. ಬ್ಯಾಂಕ್, ರೈಲ್ವೆ, ದೂರ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಹಿಂದಿ ಭಾಷೆಯನ್ನು ಕಲಿತವರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಎಸ್ ವಹಿಸಿದ್ದರು.
ವೇದಿಕೆಯಲ್ಲಿ ಹಿಂದಿ ವಿಭಾಗದ ಮುಖ್ಯಸ್ಥ ಡಾ. ರಾಮಚಂದ್ರ ಪಾಟ್ಕರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ವಾಣಿ ಆರ್ ಬಲ್ಲಾಳ್ ಮತ್ತು ಐ.ಕ್ಯೂ.ಎ.ಸಿ ಸಂಚಾಲಕ ಸೋಜನ್ ಕೆ ಜಿ ಉಪಸ್ಥಿತರಿದ್ದರು.
ಡಾ.ಶಹಿದಾ ಬಾನು ಸ್ವಾಗತಿಸಿ, ಪ್ರೊ. ಸೋಫಿಯಾ ಡಾಯಸ್ ಪ್ರಾಸ್ತವಿಕವಾಗಿ ಮಾತನಾಡಿದರು. ಕೃತಿ ನಿರೂಪಿಸಿದರು. ಹಿಂದಿ ಉಪನ್ಯಾಸಕಿ ವಸಂತಿ ವಂದಿಸಿದರು.