ನಾಳೆ ಶಾಸಕಾಂಗ ಪಕ್ಷದ ಸಭೆ, ಸೋಮವಾರವೇ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ?

ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ.

ಹೊಸ ಮುಖ್ಯಮಂತ್ರಿ ಆಯ್ಕೆಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಶನಿವಾರ (ಮೇ 30) ಸಂಜೆ 4 ಗಂಟೆಗೆ ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಕರೆಯಲಾಗಿದೆ. ಸಭೆಯಲ್ಲಿ ಹೊಸ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ನಡೆಯಲಿದ್ದು, ಬಳಿಕ ಸರ್ಕಾರ ರಚನೆ ಹಕ್ಕು ಮಂಡನೆ ಪ್ರಕ್ರಿಯೆ ನಡೆಯಲಿದೆ.

ಸಭೆಯಲ್ಲಿ ಡಿ.ಕೆ.ಶಿವಕುಮಾರ್ ರಣ್ ದೀಪ್ ಸರ್ಜೆವಾಲಾ ಹಾಗೂ ಎನ್ ಎಸ್ ಬೋಸೆರಾಜುಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.

ಇದೀಗ ಡಿ.ಕೆ.ಶಿವಕುಮಾರ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ಅಧಿಕೃತವಾಗಿ ನಾಯಕನನ್ನಾಗಿ ಘೋಷಿಸುವ ನಿರೀಕ್ಷೆಯಿದೆ.

ಈ ನಡುವೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಪ್ರತ್ಯೇಕವಾಗಿ ದೆಹಲಿಗೆ ತೆರಳಿ ರಾಹುಲ್ ಗಾಂಧಿ Rahul Gandhi ಮತ್ತು ಮಲ್ಲಿಕಾರ್ಜುನ ಖರ್ಗೆ Mallikarjun Kharge ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಎಲ್ಲವೂ ನಿರೀಕ್ಷೆಯಂತೆ ನಡೆದರೆ ಸೋಮವಾರ ಸಂಜೆ ಡಿ.ಕೆ.ಶಿವಕುಮಾರ್ D. K. Shivakumar ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಪ್ರಮಾಣ ವಚನ ಕಾರ್ಯಕ್ರಮವು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಥವಾ ಕಂಠೀರವ Kanteerava Indoor Stadium ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.