ಉಡುಪಿ:ರಾಜ್ಯ ಮಟ್ಟದ ಉತ್ತಮ ಗ್ರಂಥಪಾಲಕ ಪ್ರಶಸ್ತಿಗೆ ಆಯ್ಕೆಯಾದ ಸಿ. ರಂಜಿತಾ

ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು ಇವರ ವತಿಯಿಂದ ಆಗಸ್ಟ್ 12 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಗ್ರಂಥಪಾಲಕರ ದಿನಾಚರಣೆಯ ಕಾರ್ಯಕ್ರಮದಲ್ಲಿ, 2025 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಗ್ರಂಥಪಾಲಕ ಪ್ರಶಸ್ತಿಗೆ ಆಯ್ಕೆಯಾದ ನಗರದ ಅಜ್ಜರಕಾಡು ವಿದ್ಯಾ ವಾಚಸ್ಪತಿ ಡಾ ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯ ಇಲ್ಲಿನ ಗ್ರಂಥಪಾಲಕಿ ಸಿ ರಂಜಿತಾ ಇವರಿಗೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ರವರು ಪ್ರಶಸ್ತಿ ಪ್ರದಾನ ಮಾಡಿದರು.