ಉಡುಪಿ: ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್.ಆರ್.ರಂಗನಾಥನ್ ಅವರ 131 ನೇ ಜನ್ಮದಿನದ ನೆನಪಿಗಾಗಿ ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು.
ಸಾರ್ವಜನಿಕ ಗ್ರಂಥಾಲಯ ಇಲಾಖೆ, ಉಡುಪಿ ಇದರ ಮುಖ್ಯ ಗ್ರಂಥಾಲಯ ಅಧಿಕಾರಿ ನಳಿನಿ ಜಿ ಐ ಮತ್ತು ಗ್ರಂಥಪಾಲಕಿ ರಂಜಿತ ಸಿ ಅತಿಥಿಗಳಾಗಿ ಭಾಗವಹಿಸಿದ್ದರು. ಇಂದಿನ ಡಿಜಿಟಲ್ ಜಗತ್ತಿನಲ್ಲಿ ಇ-ಸಂಪನ್ಮೂಲಗಳ ಪ್ರಾಮುಖ್ಯತೆಯನ್ನು ಅವರು ವಿವರಿಸಿದರು. ಗ್ರಂಥಾಲಯದ ಬಳಕೆದಾರರ ವಿವಿಧ ಅವಶ್ಯಕತೆಗಳನ್ನು ಪೂರೈಸಲು ಗ್ರಂಥಾಲಯದಲ್ಲಿರುವ ಭೌತಿಕ ಸಂಪನ್ಮೂಲಗಳು ಮತ್ತು ಇ-ಸಂಪನ್ಮೂಲಗಳ ನಡುವೆ ಗ್ರಂಥಪಾಲಕರು ಹೇಗೆ ಸಮತೋಲನವನ್ನು ಹೊಂದಿದ್ದಾರೆ ಎಂಬುದನ್ನು ಅವರು ಒತ್ತಿ ಹೇಳಿದರು.
ಸಂಸ್ಥೆಯ ನಿರ್ದೇಶಕ ಡಾ. ಭರತ್ ವಿ ಅವರು ಗ್ರಂಥಾಲಯದಲ್ಲಿ ಒದಗಿಸಲಾದ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು ಮತ್ತು ಓದುವ ಹವ್ಯಾಸವನ್ನು ಬೆಳೆಸಲು ಕರೆ ನೀಡಿದರು.
ಪೂರ್ಣಪ್ರಜ್ಞ ಸಂಶೋಧನಾ ಮತ್ತುಅಭಿವೃದ್ಧಿ ಕೇಂದ್ರದ ನಿರ್ದೇಶಕ ಡಾ. ಕೃಷ್ಣ ಕೊತಾಯ ಅವರು ವಿಶೇಷ ಅಭ್ಯಾಗತರಾಗಿ ಭಾಗವಹಿಸಿದ್ದರು.
ಸಂಸ್ಥೆಯ ಗ್ರಂಥಪಾಲಕ ಪುರುಷೋತ್ತಮ್ ಸ್ವಾಗತಿಸಿದರು ಮತ್ತು ಪ್ರಥಮ ಎಂಬಿಎಯ ವಿದ್ಯಾರ್ಥಿನಿಯರಾದ ಪ್ರೀತಿ ನಾಯಕ್ ವಂದಿಸಿ, ನವ್ಯ ಪ್ರಭು ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಯಾದ ಸಂತೋಷ್ ಅತಿಥಿಗಳನ್ನು ಪರಿಚಯಿಸಿದರು. ಗ್ರಂಥಾಲಯ ಸಮಿತಿಯ ಸಂಯೋಜಕಿ ಸುಜಾತ ಜಿ ಎಲ್ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಎಂಬಿಎ ವಿದ್ಯಾರ್ಥಿಗಳು ಮತ್ತು ಶಿಕ್ಷಕ ಶಿಕ್ಷಕೇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.