ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ- 2023

ಉಡುಪಿ: ಗ್ರಂಥಾಲಯಗಳು ವಿದ್ಯಾರ್ಥಿಗಳ ಕಲ್ಪನಾಶಕ್ತಿಯನ್ನು ಹೆಚ್ಚಿಸುತ್ತವೆ. ವಿವಿಧ ವಿಷಯಗಳನ್ನು ಹುಡುಕಲು ಮತ್ತು ತಿಳಿದುಕೊಳ್ಳಲು ಹೊಸ ಸ್ಪೂರ್ತಿ ನೀಡುತ್ತವೆ ಎಂದು ಅಪರ ಜಿಲ್ಲಾಧಿಕಾರಿ ಮಮತ ದೇವಿ ಜಿ. ಎಸ್ ಹೇಳಿದರು.

ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಐಕ್ಯೂಎಸಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಕಾಲೇಜಿನ ಯು. ಜಿ. ಸಭಾಂಗಣದಲ್ಲಿ ನಡೆದ ಗ್ರಂಥಾಲಯದ ಯುಟ್ಯೂಬ್ ಮತ್ತು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ – 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಂಥಾಲಯದ ಸೇವೆಗಳನ್ನು ಬಳಸಿಕೊಳ್ಳುವುದರಿಂದ ವಿದ್ಯಾರ್ಥಿಗಳು ತಮ್ಮ ಜೀವನ ಗುಣಮಟ್ಟವನ್ನು ಸುಧಾರಿಸಿಕೊಳ್ಳಲು ಸಾಧ್ಯ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿ ವೆಂಕಟೇಶ್ ಆಯ್ಕೆ ಶ್ರೇಣಿ ಗ್ರಂಥಪಾಲಕ ಎಂ.ಪಿ.ಎಂ. ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ ಇವರು ವಿದ್ಯಾರ್ಥಿಗಳಿಗೆ WEB OPAC ಸೇವೆ ಮತ್ತು N-LIST ಬಳಕೆದಾರರ ಜಾಗೃತಿ ಕಾರ್ಯಾಗಾರವನ್ನು ನಡೆಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಎಸ್ ವಹಿಸಿದರು.

ಐಕ್ಯೂಎಸಿ ಸಂಚಾಲಕ ಸೋಜನ್ ಕೆ. ಜಿ, ವಿಜ್ಞಾನ ನಿಕಾಯ ಡೀನ್ ಪ್ರೊ. ಶ್ರೀಧರ್ ಪ್ರಸಾದ ಕೆ, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಡಾ. ವಾಣಿ ಆರ್ ಬಲ್ಲಾಳ್ ಹಾಗೂ ಸಮಾಜಶಾಸ್ತ್ರ ಮುಖ್ಯಸ್ಥ ಡಾ. ರಾಜೆಂದ್ರ ಕೆ ಉಪಸ್ಥಿತರಿದ್ದರು.

ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕಿ ಯಶೋದಾ ಸ್ವಾಗತಿಸಿ, ಅಂತಿಮ ಬಿ.ಎ ವಿದ್ಯಾರ್ಥಿನಿ ಅಮೃತ ನಿರೂಪಿಸಿ, ಕು. ಚೈತ್ರಾ ಕೆ.ಸಿ ವಂದಿಸಿದರು.