ಉಡುಪಿ: ಲೈಟ್ ಫಿಶಿಂಗ್, ಬುಲ್ ಟ್ರಾಲ್ ಅವೈಜ್ಞಾನಿಕ ಮೀನುಗಾರಿಕೆ ವಿರೋಧಿಸಿ ಮಲ್ಪೆ ಆಳ ಸಮುದ್ರ ಮೀನುಗಾರರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಮಲ್ಪೆ ಮೀನುಗಾರಿಕೆ ಉಪನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಮಂಗಳವಾರ ನಡೆಯಿತು. ಪರ್ಸಿನ್ ಮೀನುಗಾರರು ಅವೈಜ್ಞಾನಿಕ ಮೀನುಗಾರಿಕೆ ನಡೆಸುತ್ತಿದ್ದರೂ ಇದುವರೆಗೆ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಎರಡು ಗುಂಪುಗಳ ಮಧ್ಯೆ ತಳ್ಳಾಟ:
ಬಂದರು ಗೇಟ್ ಬಂದ್ ಮಾಡಿರುವುದನ್ನು ವಿರೋಧಿಸಿ ಪರ್ಸಿನ್ ಮೀನುಗಾರರು ಗೇಟ್ ತೆರವಿಗೆ ಆಗ್ರಹಿಸಿದರು. ಈ ವೇಳೆ ತಳ್ಳಾಟ, ಮಾತಿನ ಚಕಮಕಿ ನಡೆಯಿತು.
ಪೊಲೀಸರ ಬಿಗುಬಂದೋಬಸ್ತ್:
ಪ್ರತಿಭಟನೆಯ ವೇಳೆ ಹತ್ತಾರು ಪೊಲೀಸರು ಬಂದೋಬಸ್ತ್ ನಡೆಸಿದ್ದರು. ಪೊಲೀಸರು ಎರಡು ಕಡೆಯ ಮುಖಂಡರ ಜತೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.