ಗಣೇಶ ವಿಸರ್ಜನೆ ಹಿನ್ನೆಲೆ ನಾಳೆಯಿಂದ 5 ದಿನ ಈ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು: ರಾಷ್ಟ್ರ ರಾಜಧಾನಿ ಬೆಂಗಳೂರಿನ (Bengaluru) ಹಲವು ಕಡೆ ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆ ನಾಳೆಯಿಂದ 5 ದಿನ ಬೆಂಗಳೂರಿನ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು (Liquor Sales) ನಿಷೇಧ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಬೆಂಗಳೂರು ಪೊಲೀಸ್ (Bengaluru Police) ಆಯುಕ್ತರ ಆದೇಶ ಹೊರಡಿಸಿದ್ದಾರೆ.
ಎಲ್ಲೆಲ್ಲಿ ಮದ್ಯ ಬ್ಯಾನ್? ಸೆ.16ರಂದು ಆರ್.ಟಿ. ನಗರ, ಜೆ.ಸಿ.ನಗರ, ಹೆಬ್ಬಾಳ, ಸಂಜಯನಗರ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಳೆ ಬೆಳಿಗ್ಗೆ 10 ರಿಂದ ಸೆ. 17ರ ಮಧ್ಯಾಹ್ನ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇನ್ನು, ಸೆಪ್ಟೆಂಬರ್ 18ರಂದು ಸಂಪಿಗೆಹಳ್ಳಿ, ಅಮೃತಹಳ್ಳಿ ಮತ್ತು ಕೊತ್ತನೂರು, ಹೆಣ್ಣೂರು, ಬಾಣಸವಾಡಿ, ಗೋವಿಂದಪುರ, ಕೆ.ಜಿ. ಹಳ್ಳಿ, ಡಿ.ಜೆ ಹಳ್ಳಿ, ಪುಲಿಕೇಶಿನಗರ, ಭಾರತಿನಗರ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಇಂದಿರಾನಗರ ಮತ್ತು ಹಲಸೂರುನಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 11:59 ಗಂಟೆಯವರೆಗೆ ಎಣ್ಣೆ ಮಾರಾಟ ಬ್ಯಾನ್ ಮಾಡಲಾಗಿದೆ.















